3 ಕೋಟಿಯಿಂದ 73 ಲಕ್ಷಕ್ಕೆ ಇಳಿದ ತಿರುಪತಿ ತಿಮ್ಮಪ್ಪನ ದಿನದ ಆದಾಯ..!

ತಿರುಪತಿ: ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಒಂದು ವಾರಗಳ ಕಾಲ ಅಷ್ಟಬಂಧ ಬಾಲಾಲಯ ಮಹಾಸಂಪ್ರೋಕ್ಷಣಂ ಪೂಜೆ ಕಾರ್ಯ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ದರ್ಶನ ನಿರ್ಬಂಧಿಸಲಾಗಿದೆ.

ದೇವಾಲಯಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡದೇ ಕೇವಲ ಸೀಮಿತ ಜನರಿಗೆ ಮಾತ್ರ ಅವಕಾಶ ಪರಿಣಾಮ ತಿಮ್ಮಪ್ಪನ ಹುಂಡಿಯಲ್ಲಿ ಬೀಳುತ್ತಿದ್ದ ಕಾಣಿಕೆಯಲ್ಲಿ ದಾಖಲೆಯ ಕುಸಿತವಾಗಿದೆ.

ವಿಶೇಷ ಪೂಜೆ ಹಿನ್ನೆಲೆಯಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಆಡಳಿತ ಮಂಡಳಿ ಸಂಪೂರ್ಣ ನಿರ್ಬಂಧ ಹೇರಿತ್ತಾದರೂ ನಂತರ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಕೇವಲ 30 ಸಾವಿರ ಭಕ್ತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ನಿತ್ಯ ದೇವಾಲಯಗಳಲ್ಲಿ ಆಭರಣ ಹೊರತು ಪಡಿಸಿ ಹುಂಡಿಯಲ್ಲಿ ಸುಮಾರು 3 ಕೋಟಿಯಷ್ಟು ಹಣ ಸಂಗ್ರಹವಾಗುತ್ತಿತ್ತು. ಆದರೆ ಸೋಮವಾರ ಕೇವಲ 73 ಲಕ್ಷ ಮಾತ್ರ ಸಂಗ್ರಹವಾಗಿದೆ ದೇವಾಲಯ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

Please follow and like us:

Leave a Reply